ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಹೀಗಾಗಿ ಸಭೆ- ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ. ಇಷ್ಟಿದ್ದರೂ ಕಾಂಗ್ರೆಸ್ ಪಕ್ಷದ ಮುಖಂಡರೂ, ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯರೊಬ್ಬರು ಅದ್ದೂರಿಯಾಗಿ ಹುಟ್ಟು ಹಬ್ಬ ಆಚರಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಇವರು ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ಳುವ ಮೂಲಕ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡ ಪಾಲಿಕೆಯ ಮಾಜಿ ಸದಸ್ಯ ಅಲ್ತಾಫ್ ಕಿತ್ತೂರು ಎಂಬುವವರೇ ಕೊವಿಡ್ ನಿಯಮ ಗಾಳಿಗೆ ತೂರಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಅಲ್ಲದೇ, ಈ ಪಾರ್ಟಿಯಲ್ಲಿ ಭಾಗವಹಿಸಿದ್ದ ಬಹುತೇಕರು ಮಾಸ್ಕ್ ಹಾಕಿಕೊಳ್ಳದೆ ಸಾಮಾಜಿಕ ಅಂತರ ಕಾಪಾಡದೆ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.
ಅಲ್ತಾಫ್ ನವಾಜ್ ಕಿತ್ತೂರ ಅವರು ಹಳೇ ಹುಬ್ಬಳ್ಳಿಯ ಅಲ್ತಾಪ್ ಪ್ಲಾಟ್ ಮಸೀದಿಯಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಇಳಿ ಮುಖವಾಗುತ್ತಿದೆ. ಆದರೂ ಜಿಲ್ಲೆಯಲ್ಲಿ ಜೂ. 7ರವರೆಗೆ ಕಠಿಣ ಲಾಕ್ ಡೌನ್ ನ್ನು ಜಿಲ್ಲಾಡಳಿತ ಘೋಷಿಸಿದೆ. ಇಂತಹ ಸಂದರ್ಭದಲ್ಲಿ ಸರ್ಕಾರದ ನಿಯಮವನ್ನು ಗಾಳಿಗೆ ತೂರಿ ಹುಟ್ಟು ಹಬ್ಬ ಆಚರಿಸಿಕೊಂಡಿರುವ ನಾಯಕರ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.