ಕರ್ನಾಟಕದ ಹಲವೆಡೆ ಇಂದಿನಿಂದ ಮೂರು ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

0
Spread the love

ಬೆಂಗಳೂರು:- ಕರ್ನಾಟಕದ ಹಲವೆಡೆ ಇಂದಿನಿಂದ ಮೂರು ದಿನ ಭಾರೀ ಮಳೆ ಆಗಲಿದ್ದು, ಆರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಕೊಡಗು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಂಗಳವಾರ ಅಲ್ಲಲ್ಲಿ ತುಂತುರು ಮಳೆಯಾಗಿದೆ.ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here