Axiom 4 mission: ಇಂದು ಬಾಹ್ಯಾಕಾಶಕ್ಕೆ ಹಾರಲಿದ್ದಾರೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ..!

0
Spread the love

ಬೆಂಗಳೂರು: ಭಾರತದ ಬಾಹ್ಯಾಕಾಶ ಯಾನದಲ್ಲಿ ಒಂದು ದೊಡ್ಡ ಮತ್ತು ಐತಿಹಾಸಿಕ ದಿನ ಕೊನೆಗೂ ಹತ್ತಿರ ಬಂದಿದ್ದು, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಇಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿದ್ದಾರೆ. ಹೌದು ಹಲವು ವಿಳಂಬಗಳ ಬಳಿಕ ನಾಸಾ, ಆಕ್ಸಿಯಂ ಸ್ಪೇಸ್ ಮತ್ತು ಸ್ಪೇಸ್ಎಕ್ಸ್ ಬಹು ನಿರೀಕ್ಷಿತ ಯೋಜನೆಯಾದ ಆಕ್ಸಿಯಂ ಮಿಷನ್ 4 (ಆಕ್ಸ್-4) ಅನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಉಡಾವಣೆ ಮಾಡಲು ಸಜ್ಜಾಗಿವೆ.

Advertisement

ಅಮೆರಿಕಾದ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ರಾಕೆಟ್ ಇಂದು ಮಧ್ಯಾಹ್ನ 12 ಗಂಟೆ ಒಂದು ನಿಮಿಷಕ್ಕೆ ಉಡಾವಣೆ ಆಗಲಿದೆ. ಶುಕ್ಲಾ ಸೇರಿದಂತೆ ನಾಲ್ವರನ್ನು ಹೊತ್ತ ಅಮೆರಿಕದ ಆ್ಯಕ್ಸಿಮ್-4 ನೌಕೆಯಲ್ಲಿ ನಾಲ್ವರು ವಿಜ್ಞಾನಿಗಳು ಇರಲಿದ್ದಾರೆ. ಮಧ್ಯಾಹ್ನ 12.01ಕ್ಕೆ ನೌಕೆ ಆಕಾಶಕ್ಕೆ ಜಿಗಿಯಲಿದೆ.

ಗುರುವಾರ ಸಂಜೆ 4.30 ವೇಳೆಗೆ ಅಂತಾರಾಷ್ಟ್ರೀಯ ಬಾಹ್ಯಾ ಕಾಶ ಕೇಂದ್ರ ತಲುಪುವ ಸಾಧ್ಯತೆ ಇದೆ. ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ. ನಾಲ್ವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವೈಜ್ಞಾನಿಕ ಪ್ರಯೋಗ ನಡೆಸಲಿದ್ದಾರೆ.


Spread the love

LEAVE A REPLY

Please enter your comment!
Please enter your name here