ಮುಂಬೈ:- ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆಯಲ್ಲಿ 14 ದಿನವಿದ್ದ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಬಿಲಾಲ್ ಅಹ್ಮದ್ ಫಯಾಜ್ ಅಹ್ಮದ್ ತೇಲಿ ಬಂಧಿತ ಆರೋಪಿ.
Advertisement
ಜೂನ್ 17 ರಂದು ಕ್ಯಾಂಪಸ್ ಭದ್ರತಾ ತಂಡವು ಆತನನ್ನು ಹಿಡಿದು ಪೊವೈ ಪೊಲೀಸರಿಗೆ ಹಸ್ತಾಂತರಿಸಿದೆ. ಭಾರಿ ಭದ್ರತಾ ಲೋಪ ಇದಾಗಿದ್ದು ಪ್ರಶ್ನೆಗಳ ಸುರಿಮಳೆಯೇ ಬಂದಿದೆ. ಭದ್ರತೆಯನ್ನು ತಪ್ಪಿಸಿ ಕ್ಯಾಂಪಸ್ಗೆ ಹೇಗೆ ಪ್ರವೇಶಿಸಿದ್ದ ಮತ್ತು ರಾತ್ರಿ ಎಲ್ಲಿ ಕಳೆದಿದ್ದ ಎಂಬುದರ ಕುರಿತು ಈಗ ತನಿಖೆ ನಡೆಸಲಾಗುತ್ತಿದೆ.
ಈ ಯುವಕ ಯಾವುದೋ ದೊಡ್ಡ ಪಿತೂರಿ ಮಾಡಲು ಇಲ್ಲಿಗೆ ಬಂದಿರುವ ಅನುಮಾನವಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಐಐಟಿ ಬಾಂಬೆಯ ಭದ್ರತೆ ಮತ್ತು ಜಾಗೃತ ಇಲಾಖೆ ಸಲ್ಲಿಸಿದ ಎಫ್ಐಆರ್ ಪ್ರಕಾರ, ರಾಹುಲ್ ದತ್ತಾರಾಮ್ ಪಾಟೀಲ್ ಸಂಸ್ಥೆಯ ಉದ್ಯೋಗಿಯಾಗಿದ್ದು ಅವರೇ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.