HomeKarnataka Newsವಿದ್ಯುತ್​ ಗ್ರಾಹಕರಿಗೆ ಗುಡ್ ನ್ಯೂಸ್: ವಿದ್ಯುತ್ ಕನಿಷ್ಠ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ ಎಂದ ಹೈಕೋರ್ಟ್!

ವಿದ್ಯುತ್​ ಗ್ರಾಹಕರಿಗೆ ಗುಡ್ ನ್ಯೂಸ್: ವಿದ್ಯುತ್ ಕನಿಷ್ಠ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ ಎಂದ ಹೈಕೋರ್ಟ್!

For Dai;y Updates Join Our whatsapp Group

Spread the love

ಬೆಂಗಳೂರು:- ವಿದ್ಯುತ್​ ಗ್ರಾಹಕರಿಗೆ ಕರ್ನಾಟಕ ಹೈಕೋರ್ಟ್ ಗುಡ್ ನ್ಯೂಸ್ ಕೊಟ್ಟಿದೆ. ವಿದ್ಯುತ್​ ಕನಿಷ್ಠ ಶುಲ್ಕಗಳ ಮೇಲೆ ತೆರಿಗೆ ವಿಧಿಸುವಂತಿಲ್ಲ. ಬಳಸಿದ ವಿದ್ಯುತ್ ಶುಲ್ಕಕ್ಕೆ ಮಾತ್ರ ತೆರಿಗೆ ವಿಧಿಸಬಹುದು. ಬಳಸದ ವಿದ್ಯುತ್​ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ ಎಂದು ನ್ಯಾ.ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಹೈಕೋರ್ಟ್​ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.

ವಿದ್ಯುತ್ ಕನಿಷ್ಠ ಶುಲ್ಕದ ಮೇಲಿನ ತೆರಿಗೆಯನ್ನು ಅಸಂವಿಧಾನಿಕ ಎಂದು ಹೈಕೋರ್ಟ್​ ಆದೇಶ ನೀಡಿದೆ. ಕೇವಲ ಬಳಕೆಯಾದ ವಿದ್ಯುತ್‌ಗೆ ಮಾತ್ರ ತೆರಿಗೆ ವಿಧಿಸಬೇಕು ಎಂದು ಆದೇಶಿಸಿದ್ದು, 2003 ಮತ್ತು 2004ರ ತಿದ್ದುಪಡಿಗಳನ್ನು ರದ್ದುಗೊಳಿಸಲಾಗಿದೆ. ಈ ಮೂಲಕ ಹೈಕೋರ್ಟ್​ ನ ಈ ಆದೇಶ ಗ್ರಾಹಕರ ಮೇಲಿನ ಹೊರೆಯನ್ನು ಕಡಿಮೆ ಮಾಡಿದಂತಾಗಿದೆ.

ಪ್ರಕರಣ ಏನು?

ಕರ್ನಾಟಕ ವಿದ್ಯುತ್ ಕಾಯ್ದೆ 1959ರ ಸೆಕ್ಷನ್​ 3 (1) ಗೆ 2003ರಲ್ಲಿ ಮತ್ತು 2004ರಲ್ಲಿ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದೆ. ಈ ತಿದ್ದುಪಡಿ ಮೂಲಕ ವಿದ್ಯುತ್​ ಕನಿಷ್ಠ ಶುಲಕ್ಕಕ್ಕೆ ತೆರಿಗೆ ವಿಧಿಸಲಾಗಿದೆ. ಈ ತಿದ್ದುಪಡಿಯು ನಿಯಮದ ತದ್ವಿರುದ್ಧವಾಗಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಾಗೂ ಮೆಸಸ್​ ಸೋನಾ ಸಿಂಥೆಟೆಕ್ ಕಂಪನಿ ಅರ್ಜಿ ಸಲ್ಲಿಸಿದ್ದವು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ, ಈಗಾಗಲೇ ಸಂಗ್ರಹಿಸಿರುವ ತೆರಿಗೆಯನ್ನು ಹಿಂದಿರುಗಿಸುವಂತೆ ನಿರ್ದೇಶನ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದೆ. ಇದೇ ವೇಳೆ, ವಿದ್ಯುತ್​ ಶುಲ್ಕದ ಮೇಲಿನ ತೆರಿಗೆ ವಿಧಿಸಿದ್ದ ತಿದ್ದುಪಡಿಯನ್ನು ಅಸಂವಿಧಾನಿಕ ಎಂದು ಘೋಷಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!