HomePolitics Newsಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ಕೇಸ್: ಇದು ರಾಜ್ಯಕ್ಕೆ ಕಳಂಕ ಎಂದ ಆರ್ ಅಶೋಕ್!

ಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ಕೇಸ್: ಇದು ರಾಜ್ಯಕ್ಕೆ ಕಳಂಕ ಎಂದ ಆರ್ ಅಶೋಕ್!

For Dai;y Updates Join Our whatsapp Group

Spread the love

ಬೆಂಗಳೂರು:- ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ X ಮಾಡಿರುವ ಅವರು, ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ ಹುಲಿಗಳು ಮೃತಪಟ್ಟಿರುವ ವಿಷಯ ಅತ್ಯಂತ ಆಘಾತಕಾರಿ. ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ರಾಜ್ಯಕ್ಕೆ ಕಳಂಕ ತಂದಿದೆ.

ಮಲೆ ಮಹದೇಶ್ವರ ಕಾಡು ಹುಲಿ ಸಂತತಿ ಹೆಚ್ಚಳಕ್ಕೆ ಬೇಕಾದ ಎಲ್ಲಾ ಅಗತ್ಯ ವಾತಾವರಣವನ್ನು ಹೊಂದಿದೆ. ಆದರೆ ಅರಣ್ಯ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ಭ್ರಷ್ಟಾಚಾರ ನಮ್ಮ ವನ್ಯ ಸಂಪತ್ತನ್ನು ಹಾಳು ಮಾಡುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ, ಸರ್ಕಾರ ಅರಣ್ಯ ಇಲಾಖೆಯಲ್ಲಿ ಆಡಳಿತ ಬಿಗಿಗೊಳಿಸದಿದ್ದರೆ ಇಡೀ ಅರಣ್ಯವೇ ಸರ್ವನಾಶ ಆಗುವ ಅಪಾಯವಿದೆ. ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರಿಗೆ ಮುಲಾಜಿಲ್ಲದೆ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!