HomeKarnataka Newsಕರ್ನಾಟಕದಲ್ಲಿ ಭಾರೀ ಮಳೆ: ಕೊಡಗಿಗೆ ರೆಡ್ ಅಲರ್ಟ್.. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಭಾರೀ ಮಳೆ: ಕೊಡಗಿಗೆ ರೆಡ್ ಅಲರ್ಟ್.. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

For Dai;y Updates Join Our whatsapp Group

Spread the love

ಬೆಂಗಳೂರು:- ಕರ್ನಾಟಕದಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ಅದರಂತೆ ಇನ್ನೂ ಕೆಲವು ದಿನ ಧಾರಕಾರ ಮಳೆ ಅಬ್ಬರ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ. ಎಚ್​ಎಎಲ್​ನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!