KSRTC ಬಸ್- ಪಿಕಪ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ!

0
Spread the love

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ಕೆಎಸ್ಆರ್‌ಟಿಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಪಿಕಪ್ ವಾಹನದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜರುಗಿದೆ.

Advertisement

ಚಿಕ್ಕಮಗಳೂರಿನಿಂದ ಸೆಂಟ್ರಿಂಗ್ ವಸ್ತುಗಳನ್ನು ತುಂಬಿಕೊಂಡು ಮೂಡಿಗೆರೆ ಕಡೆಗೆ ಹೋಗುತ್ತಿದ್ದ ಪಿಕಪ್ ವಾಹನಕ್ಕೆ ಧರ್ಮಸ್ಥಳದಿಂದ ಹೊಸದುರ್ಗ ಕಡೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಪರಿಣಾಮ ಪಿಕಪ್ ವಾಹನ ಸಂಪೂರ್ಣ ಜಖಂ ಆಗಿದೆ. ಪಿಕಪ್ ನಲ್ಲಿದ್ದ ಕುರುವಂಗಿ ಗ್ರಾಮದ ಶರಣ್ ಮತ್ತು ಆದಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಕೆಎಸ್ಆರ್‌ಟಿಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here