HomeGadag Newsವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಿ

ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಎಲ್ಲ ವಸತಿ ನಿಲಯಲಗಳಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಘಟಕದ ವತಿಯಿಂದ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಹನಮಂತಪ್ಪ ಎಚ್.ಅಬ್ಬಿಗೇರಿ ಮಾತನಾಡಿ, ಗದಗ ಜಿಲ್ಲೆಯಲ್ಲಿ ಅನೇಕ ವಸತಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಇದ್ದು, ಸದರ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳು, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ಇಲಾಖೆಗಳ ವಸತಿ ನಿಲಯಗಳಲ್ಲಿ ಸರಿಯಾಗಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯದ ವ್ಯವಸ್ಥೆ, ಆಹಾರದ ವ್ಯವಸ್ಥೆ ಸರಿ ಇಲ್ಲ. ಇದರಿಂದ ಅಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ವಸತಿ ಶಾಲೆಗಳಿಗೆ ಈ ಕೂಡಲೇ ಮೂಲಭೂತ ಸೌಕರ್ಯದ ವ್ಯವಸ್ಥೆಯನ್ನು ಮಾಡಬೇಕೆಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ವಿನಾಯಕ ಬದಿ, ಭರಮಣ್ಣ ಕಿಲ್ಲಾರಿ, ಮುತ್ತಣ್ಣ ಚವಡಣ್ಣವರ, ತೌಸಿಫ ಢಾಲಾಯತ, ಕುಮಾರ ರೇವಣ್ಣವರ, ದಾವಲಸಾಬ ತಹಸೀಲ್ದಾರ, ರೆಹಮಾನ ದರ್ಗದ, ಇರ್ಫಾನ ತಾಳಿಕೋಟಿ, ಸುಲೇಮಾನ ಮಂಜಲಾಪೂರ, ಸಲ್ಮಾನ ಚಿಕ್ಕೊಪ್ಪ, ಕಾಂತೇಶ, ಹುಚ್ಚಪ್ಪ ಗಡಾದ, ಮೆಹಬೂಬಸಾಬ ಗದಗ, ಹನಮಂತಪ್ಪ ಪೂಜಾರ ಸೇರಿದಂತೆ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!