Home Gadag News ಬಿ.ಎಸ್. ಪಾಟೀಲರಿಗೆ `ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’

ಬಿ.ಎಸ್. ಪಾಟೀಲರಿಗೆ `ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’

0
ಬಿ.ಎಸ್. ಪಾಟೀಲರಿಗೆ `ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’
Spread the love

ವಿಜಯಸಾಕ್ಷಿ ಸುದ್ದಿ, ಡಂಬಳ: ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಪ್ರತಿ ವರ್ಷ ಮಾಧ್ಯಮ, ಸಿನಿಮಾ, ಸಂಗೀತ, ಸಮಾಜಸೇವೆ, ಸಾರ್ವಜನಿಕ ಆಡಳಿತ ಸೇರಿದಂತೆ ವಿವಿಧ ರಂಗದ ಸಾಧಕರನ್ನು ಗುರುತಿಸಿ ಕೆಂಪೇಗೌಡ ಪ್ರಶಸ್ತಿ ನೀಡುತ್ತಿದ್ದು, ಈ ಬಾರಿ ವಿವಿಧ ರಂಗದ 52 ಸಾಧಕರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿಗಳು, ಬ್ರ‍್ಯಾಂಡ್ ಬೆಂಗಳೂರು ಯೋಜನಾ ಸಮಿತಿಯ ಅಧ್ಯಕ್ಷರಾದ ಬಿ.ಎಸ್. ಪಾಟೀಲ್, ಗಾಯಕಿ ಸಂಗೀತಾ ಕಟ್ಟಿ, ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ, ಸುಪ್ರೀಂ ಕೋರ್ಟ್ ವಕೀಲರಾದ ಶ್ಯಾಮಸುಂದರ್ ಸೇರಿದಂತೆ 52 ಸಾಧಕರನ್ನು ಈ ಬಾರಿ ಕೆಂಪೇಗೌಡ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here