ಬೆಂಗಳೂರು:- ಬೆಂಗಳೂರಿನ ಎಸ್‌ಆರ್‌ಎಸ್ ಸಿಗ್ನಲ್ ಬಳಿ ಇಂದು ಬೆಳ್ಳಂ ಬೆಳಗ್ಗೆ ಅಪಘಾತ ಸಂಭವಿಸಿದೆ. ಸಿಗ್ನಲ್ ಅಲ್ಲಿ ಟೆಂಪೋ ಅಡ್ಡ ಬಂದ ಹಿನ್ನೆಲೆ ಬ್ರೇಕ್ ಫೇಲ್ ಆಗಿ ಕೆಎಸ್‌ಆರ್‌ಟಿಸಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಜರುಗಿದೆ.
Advertisement
ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಒಬ್ಬ ಮಹಿಳೆಗೆ ಮಾತ್ರ ಕಾಲಿಗೆ ಗಾಯವಾಗಿದೆ. ಉಳಿದಂತೆ ಎಲ್ಲಾ ಪ್ರಯಾಣಿಕರು ಸೇಫ್ ಆಗಿದ್ದಾರೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಸು ಡಿವೈಡರ್‌ಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಹತ್ತಿದೆ. ಬಸ್ಸಿನಲ್ಲಿ ಸುಮಾರು 42 ಪ್ರಯಾಣಿಕರಿದ್ರು ಎನ್ನಲಾಗಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.