ಪುನೀತ್‌ ರಾಜ್‌ ಕುಮಾರ್‌ ನಟನೆಯ ಹುಡುಗರು ಸಿನಿಮಾದಲ್ಲಿ ‘ಪಂಕಜಾ’ ಹಾಡಿಗೆ ಸ್ಟೆಪ್‌ ಹಾಕಿದ್ದ ನಟಿ ನಿಧನ

0
Spread the love

ಪುನೀತ್ ರಾಜ್​ಕುಮಾರ್ ನಟನೆಯಹುಡುಗರು ಸಿನಿಮಾದಲ್ಲಿ ನಾ ಬೋರ್ಡು ಇರದ ಬಸ್ಸನು ಹಾಡಿಗೆ ಕುಣಿದಿದ್ದ ಬಾಲಿವುಡ್‌ನ ಖ್ಯಾತ ನಟಿ ಹಾಗೂ ಮಾಡೆಲ್​ ಶೆಫಾಲಿ ಜರಿವಾಲಾ ತಡರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಶೆಫಾಲಿ ಜರಿವಾಲಾ ಸಾವು ಆಕೆಯ ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ದೊಡ್ಡ ಶಾಕ್‌ ನೀಡಿದೆ.

Advertisement

ಶೆಫಾಲಿ ಜರಿವಾಲಾ ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದು, ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾಗಿದ್ದಾರೆ. ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಅಷ್ಟರಲ್ಲಾಗಲೇ ಅವರು ನಿಧನ ಹೊಂದಿದ್ದು, ಪ್ರಸ್ತುತ, ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಎದೆ ನೋವು ಕಾಣಿಸಿದ ತಕ್ಷಣ ಶೆಫಾಲಿ ಜರಿವಾಲಾ ಅವರನ್ನು ಪತಿ ಪರಾಗ್ ತ್ಯಾಗಿ ಹಾಗೂ ಮೂವರು ವ್ಯಕ್ತಿಗಳು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೂ ನಟಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಆಸ್ಪತ್ರೆಯಿಂದ ಹೊರ ಬರುವಾಗ ಪರಾಗ್ ತ್ಯಾಗಿ ಯಾವುದೇ ಪ್ರತಿಕ್ರಿಯೆಗಳನ್ನು ನೀಡದೇ ಹಾಗೇಯೇ ಹೋಗಿದ್ದಾರೆ.

1982ರ ಡಿಸೆಂಬರ್ 15ರಂದು ಮುಂಬೈನಲ್ಲಿ ಹುಟ್ಟಿ ಬೆಳೆದ ಶೆಫಾಲಿ ಜನಿಸಿದ್ದು 2004ರಲ್ಲಿ ಅವರು ಹರ್ಮೀತ್ ಸಿಂಗ್​ ಎಂಬುವವರನ್ನು ವಿವಾಹ ಆದರು. ಈ ಸಂಬಂಧ 2009ರವರೆಗೆ ಇತ್ತು. ಆ ಬಳಿಕ ಇಬ್ಬರು ವಿಚ್ಛೇದನ ಪಡೆದರು. 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ವಿವಾಹವಾಗಿದ್ದರು.

2004ರ ‘ಕಾಂಟಾ ಲಗಾ..’ ಹಾಡಿನಲ್ಲಿ ಶೆಫಾಲಿ ಭರ್ಜರಿ ಡ್ಯಾನ್ಸ್ ಮಾಡಿದ್ದರು. 2011ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ಹುಡುಗರು’ ಸಿನಿಮಾದಲ್ಲಿ ಅವರು ‘ಪಂಕಜಾ..’ ಹಾಡಿಗೆ ಮಸ್ತ್ ಆಗಿ ಸ್ಟೆಪ್ ಹಾಕಿದ್ದರು. 2019ರಲ್ಲಿ ಆರಂಭ ಆದ ‘ಬಿಗ್ ಬಾಸ್ ಸೀಸನ್ 13’ರಲ್ಲಿಯೂ ಸ್ಪರ್ಧಿಸಿದ್ದರು.


Spread the love

LEAVE A REPLY

Please enter your comment!
Please enter your name here