HomeGadag Newsಜನರ ಸುರಕ್ಷತೆಗೆ ಪ್ರಥಮ ಆದ್ಯತೆ ಇರಲಿ

ಜನರ ಸುರಕ್ಷತೆಗೆ ಪ್ರಥಮ ಆದ್ಯತೆ ಇರಲಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ವಿಜ್ರುಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಅವರು ಸೂಚನೆಗಳನ್ನು ನೀಡಿದರು.

ಸೆಪ್ಟಂಬರ್ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10 ದಿನಗಳ ಬದಲು 11 ದಿನಗಳ ಕಾಲ ನಡೆಯಲಿದೆ. ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು. ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸೂಚಿಸಿದರು.

ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು. ಸರ್ಕಾರದ ಸಾಧನೆಗಳು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವAತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.

ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ಧಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಸುರೇಶ್ ಭೈರತಿ, ಜಿ.ಟಿ. ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ, ತನ್ವೀರ್ ಸೇಠ್, ಡಾ. ಯತೀಂದ್ರ ಎಸ್, ಡಾ. ಡಿ.ತಿಮ್ಮಯ್ಯ, ಅನಿಲ್ ಕುಮಾರ್, ಎ.ಆರ್. ಕೃಷ್ಣಮೂರ್ತಿ, ಮಧು ಜಿ.ಮಾದೇಗೌಡ, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಡಾ. ಮಾನಸ, ಪುಷ್ಪಾ ಅಮರನಾಥ್, ಅಯೂಬ್ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜು ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು.

“ಕಳೆದ ಬಾರಿ ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು 54 ಸಾವಿರಕ್ಕೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಜಂಬೂ ಸವಾರಿ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗಿತ್ತು. ಈ ಬಾರಿ ಜನದಟ್ಟಣೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಕಾರ್ಯಕ್ರಮಗಳ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ, ಸಂವಿಧಾನ, ಅಭಿವೃದ್ಧಿ, ಉತ್ತಮ ಆಡಳಿತದ ಆಶಯದಲ್ಲಿ ದಸರಾ ಆಚರಿಸಲಾಗುವುದು”

– ಡಾ. ಹೆಚ್.ಸಿ. ಮಹದೇವಪ್ಪ.

ಸಚಿವರು.

ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10 ಲಕ್ಷಕ್ಕೂ ಹೆಚ್ಚು ಜನರು ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು. ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳ ದುರಸ್ತಿ ಕಾರ್ಯವನ್ನು ಈಗಲೇ ಆರಂಭಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!