ಬೆಂಗಳೂರು:- ಕರ್ನಾಟಕದಲ್ಲಿ ಜುಲೈ 3ರಿಂದ ಮಳೆಯ ಅಬ್ಬರ ಹೆಚ್ಚಳವಾಗಲಿದ್ದು, ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದ್ದು, ಜುಲೈ 3ರಿಂದ ಹೆಚ್ಚಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 3ರಬಳಿಕ ಮಳೆ ಹೆಚ್ಚಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆದಿದೆ. ಎಚ್ಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.