ತುಮಕೂರು:- ಜಿಲ್ಲೆ ತಿಪಟೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಚಲಿಸುತ್ತಿದ್ದ ಬಸ್ಸಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಮನೆಗೆ ನುಗ್ಗಿದ ಘಟನೆ ಜರುಗಿದೆ.
Advertisement
ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಿದ್ದಪುರ ಗ್ರಾಮದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರ ಸಮೀಪವೇ ಇರುವ ಪುಟ್ಟಣ್ಣ ಎಂಬುವರ ಮನೆಗೆ ಬಸ್ ನುಗ್ಗಿದೆ. ಬಸ್ ನುಗ್ಗಿದ ರಭಸಕ್ಕೆ ಗೋಡೆ ಫುಲ್ ಡ್ಯಾಮೇಜ್ ಆಗಿದೆ.
ಆಗುಂಬೆಯಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಏಕಾಏಕಿ ರಸ್ತೆ ಬದಿಯಿದ್ದ ಮನೆಗೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ತಿಪಟೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.