ಬೆಂಗಳೂರು:- ಮಹಿಳೆಯನ್ನ ಕೊಲೆಗೈದು ಬಳಿಕ ಶವ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವಂತಹ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ.
Advertisement
ನಿನ್ನೆ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿಗಳು, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾರೆ. 30 ರಿಂದ 35 ವರ್ಷದ ಮಹಿಳೆ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ನಡೆದಿದ್ದು, ಅಪರಿಚಿತ ಮಹಿಳೆ ಶವ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಾಗಿದೆ.
ಸದ್ಯ ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.