ಭೀಕರ ಅಪಘಾತ: ಕಾರಿಗೆ ಕ್ಯಾಂಟರ್ ಡಿಕ್ಕಿ.. ಒಂದೇ ಕುಟುಂಬದ ನಾಲ್ವರು ಸಾವು!

0
Spread the love

ತುಮಕೂರು:- ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲ್ಲೂಕಿನ ಬಿದನೆಗೆರೆ ಬಳಿ ಭಾನುವಾರ ಜರುಗಿದೆ.

Advertisement

ಪತ್ನಿ ಶೋಭಾ, ಮಗಳು ದುಂಬಿಶ್ರೀ, ಮಗ ಭಾನು, ಕಿರಣ್ ಮೃತರು. ಕುಣಿಗಲ್ ಬಳಿಯ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಬರುವ ಬೈಪಾಸ್‌ನಲ್ಲಿ ಯೂಟರ್ನ್ ತೆಗೆದುಕೊಳ್ಳುವಾಗ ಕ್ಯಾಂಟರ್‌, ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here