ಗದಗ:- ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಿಂಬದಿಯ ಸವಾರ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯವಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹೊರವಲಯದಲ್ಲಿ ಜರುಗಿದೆ.
Advertisement
63 ವರ್ಷದ ರೇವಣಪ್ಪ ಹಡಪದ ಮೃತ ಹಿಂಬದಿ ಸವಾರ. ಇವರು ಬಾಗೇವಾಡಿ ಗ್ರಾಮದ ನಿವಾಸಿ ಎನ್ನಲಾಗಿದೆ. ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಮುಂಡರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಿಂದ ರೇವಣಪ್ಪ ಅವರು ಭೀಕರವಾಗಿ ಗಾಯಗೊಂಡಿದ್ದರು. ಈ ವೇಳೆ ಆಸ್ಪತ್ರೆಗೆ ರವಾನಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.