ಬೆಂಗಳೂರು: ಕಳೆದ ಎರಡು ವಾರಗಳಿಂದ ಕರ್ನಾಟಕ ಕಾಂಗ್ರೆಸ್ ಅಲ್ಲೋಲ ಕಲ್ಲೋಲಗೊಂಡಿದೆ. ಶಾಸಕ ಬಿಆರ್ ಪಾಟೀಲ್, ರಾಜೂ ಕಾಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರಿಂದ ಕಾಂಗ್ರೆಸ್ ಇಷ್ಟು ದಿನ ಬಳಿದುಕೊಂಡಿದ್ದ ಬಣ್ಣ ಮಾಸಿದಂತಾಗಿದೆ.
ಇದರ ನಡುವೆ ಹೈಕಮಾಂಡ್ ಏನು ನಿರ್ಧರಿಸುತ್ತದೆ ಅನ್ನೋದನ್ನು ಯಾರೂ ಊಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ.
ಹೈಕಮಾಂಡ್ ಏನು ನಿರ್ಧರಿಸುತ್ತದೆ ಅನ್ನೋದನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಅದು ಪಕ್ಷದ ಹೈಕಮಾಂಡ್ ಕೈಯಲ್ಲಿದೆ. ಅದು ಹೈಕಮಾಂಡ್ಗೆ ಬಿಟ್ಟಿದ್ದು. ಮುಂದಿನ ಕ್ರಮ ತೆಗೆದುಕೊಳ್ಳುವ ಅಧಿಕಾರ ಹೈಕಮಾಂಡ್ಗೆ ಇದೆ. ಆದರೆ ಯಾರೂ ಅನಗತ್ಯವಾಗಿ ಸಮಸ್ಯೆಗಳನ್ನು ಸೃಷ್ಟಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.



