ಮೈಸೂರು: ಪಕ್ಷದ ಶಾಸಕರಿಂದಲೇ ಭ್ರಷ್ಟಾಚಾರ ಆರೋಪ, ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳು, ಸಚಿವ ಕೆಎನ್ ರಾಜಣ್ಣ ಅವರ ‘ಸೆಪ್ಟೆಂಬರ್ ಕ್ರಾಂತಿ’ ಹೇಳಿಕೆಗಳಿಂದ ತಲ್ಲಣಗೊಂಡಿರುವ ಕರ್ನಾಟಕ ಕಾಂಗ್ರೆಸ್ ಆಂತರಿಕ ಗೊಂದಲಗಳಿಗೆ ತೆರೆ ಎಳೆಯಲು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಬೆಂಗಳೂರಿಗೆ ಬರುತ್ತಿದ್ದಾರೆ.
ಇದರ ಬೆನ್ನಲ್ಲೇ ನಾನು ಮತ್ತು ಡಿಕೆ ಶಿವಕುಮಾರ್ ಒಟ್ಟಾಗಿಯೇ ಇದ್ದೇವೆ. ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಇರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮಿಬ್ಬರ ಮಧ್ಯೆ ತಂದಿಡುವ ಪ್ರಯತ್ನವನ್ನು ಮಾಡಿದರೂ ಅದು ಆಗುವುದಿಲ್ಲ. ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು ಎಂದು ಹೇಳಿದ್ದಾರೆ.
ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ. ಅದೇ ಸತ್ಯ ಎಂದು ಹೇಳುವ ಮೂಲಕ ಈ ಬಾರಿ ಸಿದ್ದರಾಮಯ್ಯ ದಸರಾ ಉದ್ಘಾಟನೆ ಮಾಡುವುದಿಲ್ಲ ಎಂದಿದ್ದ ಅಶೋಕ್ಗೆ ತಿರುಗೇಟು ನೀಡಿದ್ದಾರೆ.