ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕ ಸರ್ಕಾರ ತನಿಖೆಗೆ ವಿಶೇಷ ಸಮಿತಿ ರಚಿಸಿದೆ.
ರಾಜ್ಯ ಆರೋಗ್ಯ ಇಲಾಖೆ ಜಯದೇವ ನಿರ್ದೇಶಕ ಡಾ.ರವಿಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದು, ಹಾಸನ ಜಿಲ್ಲೆಯ ಜನರ ಸಾವಿನ ಬಗ್ಗೆ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಸಮಿತಿಗೆ ಸೂಚಿಸಿದೆ. ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರು,
ಹಾಸನ ಜಿಲ್ಲೆಯಲ್ಲಿ ಸಂಭವಿಸಿರುವ 18ಕ್ಕೂ ಹೆಚ್ಚು ಹೃದಯಾಘಾತದ ಸಾವಿನ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಈ ಸಂಬಂಧ 9 ಸಾವಿನ ಪ್ರಕರಣಗಳ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸಲು ಸಮಿತಿಗೆ ಆದೇಶಿಸಲಾಗಿದೆ. 10 ದಿನಗಳ ಒಳಗೆ ಈ ವರದಿಯನ್ನು ಸಲ್ಲಿಸುವಂತೆ ತಿಳಿಸಲಾಗಿದೆ.
ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರು ಈ ಕುರಿತು ಮಾತನಾಡಿದ್ದು, “ಹಾಸನ ಜಿಲ್ಲೆಯಲ್ಲಿ 18ಕ್ಕೂ ಹೆಚ್ಚು ಹೃದಯಾಘಾತದ ಸಾವುಗಳು ವರದಿಯಾಗಿವೆ. ಆದರೆ, ಆರೋಗ್ಯ ಇಲಾಖೆಯ ಬಳಿ ನಿಖರವಾದ ದಾಖಲೆಗಳಿಲ್ಲದ ಕಾರಣ, ಪ್ರತಿ ಸಾವಿನ ಬಗ್ಗೆ ವಿವರವಾದ ಮಾಹಿತಿ ಸಂಗ್ರಹಿಸಲು ಸಾಧ್ಯವಾಗಿಲ್ಲ. ಕೆಲವು ಸಾವಿನ ಪ್ರಕರಣಗಳ ಬಗ್ಗೆ ಮಾತ್ರ ದಾಖಲೆ ಇದೆ. ಮುಂದಿನ ದಿನಗಳಲ್ಲಿ ಎಲ್ಲ ಸಾವಿನ ಬಗ್ಗೆ ವರದಿಗಳನ್ನು ಕಡ್ಡಾಯವಾಗಿ ಸಂಗ್ರಹಿಸಿರುವುದಾಗಿ ಎಂದು ಹೇಳಿದ್ದಾರೆ.