ವಿಜಯಸಾಕ್ಷಿ ಸುದ್ದಿ, ಗದಗ: ಶೈಕ್ಷಣಿಕ ಜೀವನದ ಪ್ರಮುಖ ಘಟ್ಟವಾದ ಪದವಿಪೂರ್ವ ಹಂತವು ವಿದ್ಯಾರ್ಥಿಗಳ ಭವಿಷ್ಯದ ಭದ್ರ ಬುನಾದಿಯಾಗಿದೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ಶ್ರದ್ಧೆ, ಸತತ ಪ್ರಯತ್ನಗಳಿಂದ ಸಾಧನೆ ಮಾಡಬೇಕೆಂದು ಡಾ. ವೀರೇಶ ಹಂಚಿನಾಳ ಕರೆ ನೀಡಿದರು.
ಸನ್ಮಾರ್ಗ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡು ವರು ಮಾತನಾಡಿದರು.
ಸಂಸ್ಥೆಯ ನಿರ್ದೇಶಕ ಪ್ರೊ. ಪುನೀತ ದೇಶಪಾಂಡೆ ಮಾತನಾಡಿ, ವಿದ್ಯಾಲಯವು ನಡೆದು ಬಂದ ಹೆಜ್ಜೆ ಗುರುತುಗಳು ಹಾಗೂ ಸಾಧನೆಯ ಸೋಪಾನಗಳನ್ನು ಅನಾವರಣಗೊಳಿಸಿ, ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರಗಳ ಜೊತೆಗೆ ಸನ್ಮಿತ್ರರನ್ನು ಬೆಳೆಸಿಕೊಂಡಾಗ ಶೈಕ್ಷಣಿಕ ಸಾಧನೆ ಸುಲಭ ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಸ್ಟುಡೆಂಟ್ಸ್ ಎಜ್ಯುಕೇಶನ್ ಸೊಸೈಟಿಯ ಚೇರ್‌ಮನ್ ಪ್ರೊ. ರಾಜೇಶ ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ ಮಾತನಾಡಿದರು. ವೇದಿಕೆಯ ಮೇಲೆ ಸಂಸ್ಥೆಯ ನಿರ್ದೇಶಕರಾದ ಪ್ರೊ. ರೋಹಿತ್ ಒಡೆಯರ್, ಪ್ರೊ. ರಾಹುಲ ಒಡೆಯರ್, ಪ್ರೊ. ಸಯ್ಯದ್ ಮತೀನ್ ಮುಲ್ಲಾ ಹಾಗೂ ಆಡಳಿತಾಧಿಕಾರಿ ಎಮ್.ಸಿ. ಹಿರೇಮಠರು ಉಪಸ್ಥಿತರಿದ್ದರು.
ಪ್ರೊ. ಹೇಮಂತ ದಳವಾಯಿ ನಿರೂಪಿಸಿ, ಸಂಸತ್ತಿನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮಾನ್ಯ ಅಡಿಗ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಮುರಲೀಧರ ಸಂಕನೂರ ಸ್ವಾಗತಿಸಿದರು. ಉಪನ್ಯಾಸಕಿ ಪ್ರೊ. ಹೀನಾ ಕೌಸರ ಮಾಳೆಕೊಪ್ಪ ವಂದಿಸಿದರು.