ಹುಬ್ಬಳ್ಳಿ:- ಇಲ್ಲಿನ ಈಶ್ವರನಗರದ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ, ಇಡೀ ಮನೆ ಹೊತ್ತಿ ಉರಿದಿದೆ.
Advertisement
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಿಂದ ಮನೆಯಲ್ಲಿದ್ದ ಅಪಾರ ಪ್ರಮಾಣದ ಸಾಮಾಗ್ರಿಗಳು ಸುಟ್ಟು ಕರಕಲಾಗಿದೆ. ಮಾಹಿತಿ ಆಧರಿಸಿ ಕೂಡಲೇ ಅಗ್ನಿಶಾಮಕ ಸಿಬ್ಬಂದಿ, ಸ್ಥಳಕ್ಕಾಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನೂ ಮನೆ ಸುಟ್ಟು ಹೋದ ಮಾಲೀಕರು ತುಂಬಾ ಬಡವರಿದ್ದು, ಶಾಸಕ ಅಬ್ಬಯ್ಯಾ ಪ್ರಸಾದ್, ಸಚಿವ ಸಂತೋಷ ಲಾಡ್ ಅವರಿಗೆ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.