ಚಿಕ್ಕಮಗಳೂರು:– ವ್ಯಕ್ತಿಯೋರ್ವ ಮೆಡಿಕಲ್ ಶಾಪ್ ನಲ್ಲಿ ಮಾತ್ರೆ ಖರೀದಿಸುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ಜರುಗಿದೆ.
Advertisement
ವಿಶ್ವನಾಥ್(60) ಮೃತ ವ್ಯಕ್ತಿ. ಈತ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿವಾಸಿ ಎನ್ನಲಾಗಿದೆ. ಮೃತ ವಿಶ್ವನಾಥ್, ಚಿಕ್ಕಮಗಳೂರು ನಗರದ ದೀಪ ನರ್ಸಿಂಗ್ ಹೋಂ ಬಳಿ ಮಾತ್ರೆ ಖರೀದಿಸುವಾಗಲೇ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಇನ್ನು ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಮೂಲಕ ಚಿಕ್ಕಮಗಳೂರಿನಲ್ಲಿ 2 ತಿಂಗಳಲ್ಲಿ 13 ಜನ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಜನ ಆತಂಕಗೊಂಡಿದ್ದಾರೆ.
ಇನ್ನೂ ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಪ್ರತಿ ದಿನ ಎರಡ್ಮೂರು ಜನ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ.