Bike Taxis: ಬೈಕ್ ಟ್ಯಾಕ್ಸಿಗೆ ಚಾಲಕರಿಗೆ ಕೇಂದ್ರದಿಂದ ಅನುಮತಿ..! ರಾಜ್ಯ ಸರ್ಕಾರ ಒಪ್ಪಿಗೆ ನೀಡುತ್ತಾ?

0
Spread the love

ನವದೆಹಲಿ: ರಾಜ್ಯದಲ್ಲಿ ಓಲಾ, ಉಬರ್‌, ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸೇವೆಗಳು ಸ್ಥಗಿತಗೊಳಿಸಲಾಗಿತ್ತು. ಈ ವಿಷಯವಾಗಿ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಜೊತೆಗೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು,

Advertisement

ನಿಮ್ಮ ಖಾಸಗಿ ಬೈಕ್‌ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮಾರ್ಗಸೂಚಿಯಲ್ಲಿ ಏನಿದೆ?
– ರಾಜ್ಯ ಸರ್ಕಾರಗಳು ಖಾಸಗಿ ಬೈಕ್‌ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು.
– ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು.
– ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು
– ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದು.

 


Spread the love

LEAVE A REPLY

Please enter your comment!
Please enter your name here