ಚಿಕ್ಕಬಳ್ಳಾಪುರ:- ಬಿಜೆಪಿಯವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 5 ವರ್ಷವೂ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ. ನಿಮಗ್ಯಾಕೆ ಅನುಮಾನ ಬಂದಿದೆ? ಅಂತ ಪ್ರಶ್ನಿಸಿದ್ರು.
Advertisement
ಬಿಜೆಪಿಯವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು, ಸತ್ಯ ಹೇಳೋದು ಅವರಿಗೆ ಗೊತ್ತೇ ಇಲ್ಲ. ನಾವೆಲ್ಲರೂ ಒಟ್ಟಾಗಿದ್ದೇವೆ. 5 ವರ್ಷ ನಾವೇ ಅಧಿಕಾರದಲ್ಲಿ ಇರ್ತೇವೆ. ನಮ್ಮ ಸರ್ಕಾರ ಬಂಡೆ ತರ ಇರುತ್ತೆ ಎಂದರು. ಬಿಜೆಪಿಯವರು ಹಗಲು ಕನಸು ಕಾಣ್ತಿದ್ದಾರೆ.
ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲ. ಡಿಕೆ ಶಿವಕುಮಾರ್ ಹೇಳೋ ಹಾಗೆ ಏನೂ ಸಾಕ್ಷಿ ಗುಡ್ಡೆ ಬಿಟ್ಡು ಹೋಗಿದ್ದಾರೆ. ಕುಮಾರಸ್ವಾಮಿ ಜೊತೆ ಸಮ್ಮಿಶ್ರ ಸರ್ಕಾರದಲ್ಲಿ ಏನು ಮಾಡಿದ್ರು? ಸುಳ್ಳು ಹೇಳಿಕೊಂಡು ಜನರನ್ನ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಬಿಟ್ರೆ, ಬೇರೆನೂ ಮಾಡಿಲ್ಲ ಎಂದು ಅಸಮಾಧಾನ ಹೊರಹಾಕಿದ್ರು.