ತುಮಕೂರು:- ಅಪ್ರಾಪ್ತರ ಕೈಯಲ್ಲಿ ವಾಹನಗಳನ್ನ ಕೊಡಬಾರದು ಎಂದು ಅದೆಷ್ಟೇ ಜಾಗೃತಿ ಮೂಡಿಸಿದರೂ ಕೂಡ ಕೆಲ ಪೋಷಕರು ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ಮಕ್ಕಳ ಕೈಗೆ ಬೈಕ್, ಸ್ಕೂಟರ್ ಕೊಟ್ಟು ಕಳಿಸ್ತಾರೆ.
Advertisement
ಇದೀಗ ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡಿಸೋರು ಓದಲೇಬೇಕಾದ ಸ್ಟೋರಿ ಇದು. ತುಮಕೂರು ಜಿಲ್ಲೆಯ ಗುಬ್ಬಿ ಜೆಎಂಎಫ್ ಸಿ ನ್ಯಾಯಾಲಯವು, ಅಪ್ರಾಪ್ತನಿಗೆ ಬೈಕ್ ಕೊಟ್ಟ ತಂದೆಗೆ ಒಂದು ದಿನ ಜೈಲು ಶಿಕ್ಷೆ 30 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
ತನ್ನ ಪುತ್ರನಿಗೆ ಬೈಕ್ ಕೊಟ್ಟು ಅಪಘಾತಕ್ಕೆ ಕಾರಣವಾಗಿದ್ದ ತಂದೆಗೆ ಆರು ತಿಂಗಳುಗಳ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ನೀಡಿದೆ. ಕೋರ್ಟ್ ಹಾಲ್ನಲ್ಲಿರುವ ಸೆಲ್ನಲ್ಲೇ ಒಂದು ದಿನದ ಜೈಲು ವಾಸ ಮತ್ತು ದಂಡ ವಿಧಿಸಲಾಗಿದೆ.