ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಸದ್ಯ ರಾಧಿಕ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಮುದ್ದಾದ ಫೋಟೋವೊಂದನ್ನ ಹಂಚಿಕೊಂಡಿದ್ದು ಈ ಪೊಟೋ ನೋಡಿ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.
ರಾಧಿಕಾ ಪಂಡಿತ್ ಹಾಗೂ ಯಶ್ ವೆಕೇಶನ್ಗೆ ಅಮೆರಿಕಾಗೆ ತೆರಳಿದ್ದಾರೆ. ಯಶ್ ಅವರು ಇಷ್ಟು ದಿನ ‘ಟಾಕ್ಸಿಕ್‘ ಹಾಗೂ ‘ರಾಮಾಯಣ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು. ಈ ಕಾರಣದಿಂದ ಬ್ರೇಕ್ ಪಡೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಇಬ್ಬರೂ ಎಲ್ಲಿಯೂ ಹೊರಗೆ ತೆರಳಿ ಸುತ್ತಾಡಲು ಸಾಧ್ಯ ಆಗಿರಲಿಲ್ಲ. ಇದೀಗ ಯಶ್ ಬಿಡುವು ಪಡೆದುಕೊಂಡಿದ್ದು ಪತ್ನಿಯೊಂದಿಗೆ ವಿದೇಶಕ್ಕೆ ತೆರಳಿದ್ದಾರೆ.
ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಯಶ್ ಹಾಗೂ ರಾಧಿಕಾಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಇವರ ದಾಂಪತ್ಯಕ್ಕೆ 9 ವರ್ಷ ತುಂಬುತ್ತಾ ಬಂದಿದ್ರು ಪ್ರೀತಿ ಮಾತ್ರ ಕೊಂಚವೂ ಕಮ್ಮಿಯಾಗಿಲ್ಲ. ಶೂಟಿಂಗ್ ನಲ್ಲಿ ಯಶ್ ಎಷ್ಟೇ ಬ್ಯುಸಿಯಾಗಿದ್ರು ಕುಟುಂಬಕ್ಕೆ ಸದಾ ಸಮಯ ನೀಡುತ್ತಾರೆ. ಸಮಯ ಸಿಕ್ಕಾಗೆಲ್ಲ ಹೆಂಡತಿ ಮಕ್ಕಳ ಜೊತೆ ಸಮಯ ಕಳೆಯುತ್ತಾರೆ.