ಬೆಂಗಳೂರು:- ಮಹಿಳೆಯರ ಅಶ್ಲೀಲ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಇನ್ಫೋಸಿಸ್ ಉದ್ಯೋಗಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸ್ವಪ್ನಿಲ್ ನಾಗೇಶ್ ಮಲಿ (28) ಬಂಧಿತ ಉದ್ಯೋಗಿ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ. ಬೆಂಗಳೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಹೀಲೆಕ್ಸ್ ಡಿಪಾರ್ಟ್ಮೆಂಟ್ ನಲ್ಲಿ ಸೀನಿಯರ್ ಅಸೋಸಿಯೇಟ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಸ್ವಪ್ನಿಲ್, ಜೂನ್ 30ರಂದು ಮಹಿಳಾ ಉದ್ಯೋಗಿ ಶೌಚಾಲಯಕ್ಕೆ ಹೋಗಿದ್ದಾಗ ಕದ್ದು ವಿಡಿಯೋ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಮಹಿಳೆ ಕೊಟ್ಟ ದೂರಿನ ಮೇರೆಗೆ ಸದ್ಯ ಪೊಲೀಸರು ಸ್ವಪ್ನಿಲ್ ನನ್ಜು ಬಂಧಿಸಿದ್ದಾರೆ.
ಇನ್ನೂ ಪ್ರಾಥಮಿಕ ತನಿಖೆ ವೇಳೆ ಈತನ ಮೊಬೈಲ್ ನಲ್ಲಿ 30ಕ್ಕೂ ಹೆಚ್ಚು ಮಹಿಳೆಯರ ವಿಡಿಯೋಗಳು ಪತ್ತೆಯಾಗಿವೆ. ಜೂನ್ 30ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಮಹಿಳೆ ಮೂತ್ರ ವಿಸರ್ಜನೆಗೆ ಟಾಯ್ಲೆಟ್ ಹೋಗಿದ್ದಾಳೆ. ಮೇಲಿಂದ ಯಾರೋ ರೆಕಾರ್ಡ್ ಮಾಡುತ್ತಿರುವ ರೀತಿ ಎದುರಿನ ಡೋರ್ ನಲ್ಲಿ ಪ್ರತಿಬಿಂಬ ಕಂಡಿದೆ. ಎಚ್ಚೆತ್ತ ಮಹಿಳೆ ಹೊರಗೆ ಬಂದು ನೋಡಿದ್ದಾಳೆ. ಓರ್ವ ಯುವತಿ ಮಾತ್ರ ಕಂಡಿದ್ದಾಳೆ. ಇನ್ನೂ ಅನುಮಾನ ಪರಿಹರಿಸಿಕೊಳ್ಳಲು ಮತ್ತೆ ಟಾಯ್ಲೆಟ್ ಹೋಗೆ ಕೆಲ ಹೊತ್ತು ಮಹಿಳೆ ಕಾದಿದ್ದಾಳೆ. ಅಷ್ಟೊತ್ತಿಗೆ ಆರೋಪಿ ಪ್ಯಾಂಟ್ ಬಿಚ್ಚಿ ಕಮೊಡ್ ಮೇಲೆ ನಿಂತು ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿರುವುದು ಕಂಡಿದ್ದು, ಕೂಡಲೇ ಆ ಮಹಿಳೆ ಜೋರಾಗಿ ಕಿರುಚಾಡಿದಾಗ, ಭಯಭೀತನಾದ ಸ್ವಪ್ನಿಲ್ ಆಕೆಯ ಬಳಿ ಕ್ಷಮೆ ಕೇಳಿದ್ದಾನೆ. ಅಷ್ಟರೊಳಗೆ ಘಟನಾ ಸ್ಥಳಕ್ಕೆ ಎಚ್‌ಆರ್ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಮೊಬೈಲ್‌ನಲ್ಲಿ 30ಕ್ಕೂ ಹೆಚ್ಚು ಮಹಿಳೆಯರ ವಿಡಿಯೋಗಳು ಇರುವುದು ಪತ್ತೆಯಾಗಿದೆ.
ವಿಚಾರ ತಿಳಿಯುತ್ತಿದ್ದಂತೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಘಟನೆ ಬಗ್ಗೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸ್ಪಷ್ಟನೆ ಕೊಟ್ಟಿದ್ದಾರೆ.