ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ತಾಯಿ-ಮಗಳು- ಆಗಿದ್ದೇನು?

0
Spread the love

ಮಂಡ್ಯ:- ಮಂಡ್ಯದ ನೆಹರೂ ನಗರ ಬಡಾವಣೆಯಲ್ಲಿ ಡೆತ್‌ನೋಟ್ ಬರೆದಿಟ್ಟು ತಾಯಿ, ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜರುಗಿದೆ.

Advertisement

ನೇಣಿಗೆ ಶರಣಾಗಿರುವ ತಾಯಿ, ಮಗಳನ್ನು 28 ವರ್ಷದ ರಶ್ಮಿ, 19 ವರ್ಷದ ದಿಶಾ ಎಂದು ಗುರುತಿಸಲಾಗಿದೆ. ಇವರು ಚನ್ನಪಟ್ಟಣ ಮೂಲದವರು ಎನ್ನಲಾಗಿದೆ. ಕಳೆದ 5 ವರ್ಷದಿಂದ ಗಂಡನಿಂದ ದೂರವಾಗಿದ್ದ ರಶ್ಮಿ ಮಂಡ್ಯದ ನೆಹರೂ ನಗರದ ಬಾಡಿಗೆ ಮನೆಯಲ್ಲಿ ಮಗಳ ಜೊತೆ ವಾಸವಿದ್ದರು. ಇದರಿಂದ ಮನನೊಂದಿದ್ದ ರಶ್ಮಿ, ಡೆತ್‌ನೋಟ್ ಬರೆದಿಟ್ಟು ಮಗಳೊಂದಿಗೆ ನೇಣಿಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಮಂಡ್ಯ ಪೂರ್ವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಶ್ಮಿ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲೇನಿದೆ?

ನನಗೆ ಈ ಜೀವನ ಇಷ್ಟ ಇಲ್ಲ. ಮದುವೆಯಾಗಿಯೂ ಏನು ಸುಖವಿಲ್ಲ. ಒಂಟಿಯಾಗಿ ಐದು ವರ್ಷದಿಂದ ಜೀವನ ಮಾಡುತ್ತಿದ್ದೇನೆ. ಗಂಡನೂ ಬೇರೆ ಮದುವೆ ಆಗುತ್ತೇನೆ. ನನಗೂ ನಿನಗೂ ಸಂಬಂಧ ಇಲ್ಲ ಎಂದು ಬರೆದುಕೊಡು ಎಂದು ಒತ್ತಾಯಿಸುತ್ತಿದ್ದಾರೆ. ನನಗೆ ಈ ಜೀವನ ಸಾಕಾಗಿದೆ. ಅಮ್ಮನನ್ನು ಚೆನ್ನಾಗಿ ನೋಡಿಕೋ ಅಣ್ಣ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here