ಧಾರಕಾರ ಮಳೆ: ಉತ್ತರ ಕನ್ನಡ, ಕೊಡಗಿನ ಶಾಲೆಗಳಿಗೆ ಇಂದು ರಜೆ ಘೋಷಣೆ!

0
Spread the love

ಕಾರವಾರ:- ಧಾರಕಾರ ಮಳೆ ಮುಂದುವರಿದ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉತ್ತರ ಕನ್ನಡ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಿಸಿ ಆಯಾ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Advertisement

ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳಿಗೆ ರಜೆ ಘೋಷಣೆ:

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ನೀಡಿದ್ದಾರೆ.

ಜಿಲ್ಲೆಯಲ್ಲಿ ಗಾಳಿ ಸಹಿತ ಹೆಚ್ಚಿನ ಮಳೆಯಾಗುತಿದ್ದು, ಇಂದು ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯ ಜೊತೆಗೆ ಗಾಳಿಯ ರಭಸವೂ ಹೆಚ್ಚಿರಲಿದೆ. ಈ ಹಿನ್ನಲೆಯಲ್ಲಿ ಸಾಂಪ್ರದಾಯಿಕ ಮೀನುಗಾರಿಕೆಗೂ ಕೂಡ ನಿರ್ಬಂಧ ಹೇರಲಾಗಿದೆ. ಅಲ್ಲದೇ ಜಿಲ್ಲೆಯ ಜಲಪಾತಗಳು ಹಾಗೂ ಕಡಲತೀರ ಪ್ರದೇಶಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರೆದಿದೆ.

ಕೊಡಗು ಜಿಲ್ಲೆಯಲ್ಲಿ ರಜೆ ಘೋಷಣೆ:

ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜ ಅವರು ಆದೇಶಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here