ಹಾಸನ:- ಹೃದಯಾಘಾತದಿಂದ ಮತ್ತಿಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ಜರುಗಿದ್ದು, ಸರಣಿ ಸಾವು ಕಂಡು ಜನತೆ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಸೇರಿ 70 ವರ್ಷದ ವೃದ್ಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹೃದಯಾಘಾತಕ್ಕೆ 70ರ ವೃದ್ಧ ಬಲಿ:
ಸಕಲೇಶಪುರ ತಾಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಹೃದಯಾಘಾತದಿಂದ 70 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಜರುಗಿದೆ. ಸಿ. ಬಿ ವಿರುಪಾಕ್ಷ ಮೃತ ವ್ಯಕ್ತಿ. ಕಳೆದ ರಾತ್ರಿ 11:30 ರಲ್ಲಿ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬದವರು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ದುರಾದೃಷ್ಟವಶಾತ್ ಮಾರ್ಗ ಮಧ್ಯೆ ವಿರೂಪಾಕ್ಷ ಸಾವನ್ನಪ್ಪಿದ್ದಾರೆ.
ಹೃದಯಾಘಾತಕ್ಕೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಬಲಿ:
ಹೃದಯಾಘಾತದಿಂದ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಸಾವನ್ನಪ್ಪಿರುವ ಘಟನೆ ಆಲೂರು ತಾಲ್ಲೂಕಿನ ಕಲ್ಲಾರೆ ಗ್ರಾಮದಲ್ಲಿ ಜರುಗಿದೆ. ಸಂತೋಷ್ (40) ವರ್ಷ ಮೃತ ಯುವಕ. ಮಲಗಿದ್ದಾಗಲೇ ಬೆಳಗ್ಗಿನ ಜಾವ 5 ಗಂಟೆಯಲ್ಲಿ ಹೃದಯಾಘಾತ ಸಂಭವಿಸಿದೆ.
ಗ್ರಾಮ ಪಂಚಾಯ್ತಿ ಸದಸ್ಯರಾಗಿದ್ದ ಸಂತೋಷ್ ಸಮಾಜ ಸೇವಕರಾಗಿದ್ದರು. ಇವರ ಅಗಲಿಕೆಯಿಂದ ಗ್ರಾಮದಲ್ಲಿ ಮೌನ ಆವರಿಸಿದೆ. ಇದರಿಂದ 42 ದಿನಗಳ ಅಂತರದಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಮತ ಪಟ್ಟವರ ಸಂಖ್ಯೆ 30ಕ್ಕೆ ಏರಿಕೆ ಆಗಿದೆ.