ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು ಸೂಕ್ತವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು ಸೂಕ್ತವಲ್ಲ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು ಎಂದರು.
Advertisement
ಇನ್ನೂ ಬೆಂಗಳೂರನ್ನು ಈಗಾಗಲೇ ಒಡೆದು ಹಾಕಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರನ್ನು ಒಂದಾಗಿಸಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವುದು ಬಿಟ್ಟು, ನಾಮಫಲಕ ಬದಲಿಸುವುದರಿಂದ ಕೋಟ್ಯಂತರ ರೂಪಾಯಿ ವ್ಯರ್ಥವಾಗುತ್ತದೆ. ದಕ್ಷಿಣ, ಉತ್ತರ ಎಂದು ಹೆಸರು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೇಳಿದರು.