ಬೆಂಗಳೂರು: ಸಿದ್ದರಾಮಯ್ಯ ಕುರ್ಚಿ ಅಲುಗಾಡ್ತಿದೆ, ಅವರೊಬ್ಬ ಲಾಟರಿ ಸಿಎಂ ಎಂದು ಜೆಡಿಎಸ್ ಲೇವಡಿ ಮಾಡಿದ್ದಾರೆ.ಈ ಸಂಬಂಧ X ಮಾಡಿರುವ ಅವರು, 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಲೇವಡಿ ಮಾಡಿದೆ. ಸಿದ್ದರಾಮಯ್ಯ ಲಾಟರಿ ಸಿಎಂ. ಪದೇ ಪದೇ ನಾನೇ ಸಿಎಂ ಎಂದು ಹೇಳುತ್ತಿರುವುದು ಅವರ ಕುರ್ಚಿ ಅಲುಗಾಡುತ್ತಿದೆ ಎಂದು ಸೂಚನೆ ನೀಡುತ್ತಿದ್ದಾರೆ ಎಂದು ಟೀಕಿಸಿದೆ.
ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯನವರಿಗೆ ಬರಬಾರದಿತ್ತು. ನಾನೇ ಸಿಎಂ.. ನಾನೇ ಸಿಎಂ.. ಎಂದು ಮಾಧ್ಯಮಗಳ ಮುಂದೆ ಗಂಟಲು ಹರಿದುಕೊಳ್ಳುತ್ತಿರುವುದರ ಹಿಂದೆ ಸಿಎಂ ಕುರ್ಚಿ ಅಲುಗಾಡುತ್ತಿರುವುದನ್ನು ಸೂಚಿಸುತ್ತಿದೆ.
ತಮ್ಮ ನಾಯಕನ ಕುರ್ಚಿಗೆ ಕುತ್ತು ಬಂದಿರುವುದು ಸ್ಪಷ್ಟವಾಗುತ್ತಲೇ ಸಿದ್ದರಾಮಯ್ಯ ಆಪ್ತರು ಸಹ ಕೂಗುಮಾರಿಗಳಂತೆ ಅವರ ಪರ ಬ್ಯಾಟ್ ಬೀಸುತ್ತಿದ್ದಾರೆ. ಲಾಟರಿ ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ್ತು ನಿಮ್ಮ ನಾಯಕತ್ವದ ಬಗ್ಗೆ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೆಂಕಿ ಎದ್ದು, ಹಾದಿ ಬೀದಿಯಲ್ಲಿ ಹೊಗೆಯಾಡುತ್ತಿದೆ. ವಿಪಕ್ಷಗಳ ವಿರುದ್ಧ ಬೆಂಕಿಯುಗುಳಿದರೇ, ನಿಮ್ಮ ಹೊಟ್ಟೆ ಕಿಚ್ಚು ಮತ್ತಷ್ಟು ಉಲ್ಬಣಿಸುತ್ತದೆ ಹೊರತು ಉಪಶಮನವಾಗುವುದಿಲ್ಲ ಎಂದು ಕಿಡಿಕಾರಿದೆ.