ಬೆಂಗಳೂರು :– ಬೆಂಗಳೂರು ಹೊರವಲಯದ ಆನೇಕಲ್ ನ ಜಿಗಣಿಯಲ್ಲಿ ಶಾಲಾ ವಾಹನ ಏರಲು ರಸ್ತೆಗೆ ಓಡಿದ ಬಾಲಕನಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ.
Advertisement
ರಸ್ತೆಯ ಇನ್ನೊಂದು ಬದಿ ಇದ್ದ ಶಾಲಾ ವಾಹನ ಏರಲು ಬಾಲಕ ರಸ್ತೆ ದಾಟಲು ಮುಂದಾಗಿದ್ದಾನೆ. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಆತನಿಗೆ ಡಿಕ್ಕಿಯಾಗಿದೆ. ಇದರಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ
ಸ್ಕೂಲ್ ಬಸ್ ಚಾಲಕ, ಬಾಲಕ ಓಡಿ ಬರುತ್ತಿರುವುದನ್ನು ನೋಡಿದರೂ ಬಸ್ ನಿಲ್ಲಿಸದೇ ಮುಂದೆ ತೆರಳಿದ್ದಾನೆ. ಇದರಿಂದ ಬಾಲಕ ಆತುರದಿಂದ ರಸ್ತೆ ದಾಟಲು ಮುಂದಾಗಿದ್ದಾನೆ ಎನ್ನಲಾಗುತ್ತಿದೆ.