ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ವಿಶ್ವದ ನಂ.1 ಜಾವೆಲಿನ್ ಪಟು ನೀರಜ್ ಚೋಪ್ರಾ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ನೀರಜ್ ಚೋಪ್ರಾಗೆ ಹಾರ ಹಾಕಿ, ಶಾಲು ಹೊದಿಸಿ ಮುಖ್ಯಮಂತ್ರಿಗಳು ಸನ್ಮಾನಿಸಿದ್ದಾರೆ.
Advertisement
ಜೊತೆಗೆ ನಮ್ಮ ದೇಶಕ್ಕೆ ಇನ್ನಷ್ಟು ಪದಕಗಳನ್ನು ಗೆದ್ದು ತರುವಂತೆ ಶುಭ ಹಾರೈಸಿದ್ದಾರೆ. ಇನ್ನೂ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರ ಪ್ರದರ್ಶನಕ್ಕೆ ಕಂಠೀರವ ಕ್ರೀಡಾಂಗಣ ಇದೇ ಮೊದಲ ಸಲ ಸಜ್ಜಾಗಿದೆ.
ಜುಲೈ 5ರಂದು ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರು ಉಪಸ್ಥಿತರಿದ್ದರು.