ಕಾರವಾರ: ಧಾರಕಾರ ಮಳೆಯಿಂದಾಗಿ ಕೊಡಸಳ್ಳಿ ವಿದ್ಯುತ್‌ಗಾರದ ಬಳಿ ದೊಡ್ಡ ಪ್ರಮಾಣದ ಭೂ ಕುಸಿತವಾಗಿದ್ದು, ಕದ್ರಾ ಭಾಗದ ಬಾಳೆಮನೆ, ಸುಳಗೇರಿ ಕೊಡಸಳ್ಳಿ ಸಂಪರ್ಕ ರಸ್ತೆ ಕಡಿತವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆಯಿಂದಾಗಿ ಅವಾಂತರ ಸಂಭವಿಸಿದೆ.
Advertisement
ಕದ್ರಾದಿಂದ ಕೊಡಸಳ್ಳಿ ಡ್ಯಾಮ್ ಸಂಪರ್ಕಿಸುವ ರಸ್ತೆ ಭೂಕುಸಿತವಾದ್ದರಿಂದ ಕೊಡಸಳ್ಳಿ ಜಲ ವಿದ್ಯುತ್‌ಗಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಪಿಸಿ ಸಿಬ್ಬಂದಿಗೆ ತೆರಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.
ಅದೃಷ್ಟವಶಾತ್ ಬೆಳಗ್ಗೆ ರಸ್ತೆಯಲ್ಲಿ ಯಾವ ಸಂಚಾರವೂ ಇಲ್ಲದ ಸಂದರ್ಭದಲ್ಲಿ ಗುಡ್ಡ ಕುಸಿದಿದ್ದು, ದೊಡ್ಡ ಅನಾಹುತ ತಪ್ಪಿದೆ. ಈ ಹಿಂದೆ ಕೊಡಸಳ್ಳಿ ಬಳಿ ಗುಡ್ಡ ಕುಸಿಯುವ ಎಚ್ಚರಿಕೆಯನ್ನು ಜಿಯಾಲಜಿಕಲ್ ಸರ್ವೆ ಆಪ್ ಇಂಡಿಯಾ ವಿಜ್ಞಾನಿಗಳು ನೀಡಿದ್ದರು.