ರಾಕಿಂಗ್ ಸ್ಟಾರ್ ಯಶ್ ನಟಿಸಿ ನಿರ್ಮಿಸುತ್ತಿರುವ ಬಹುನಿರೀಕ್ಷಿತ ರಾಮಾಯಣ ಚಿತ್ರದ ಫಸ್ಟ್ ಟೈಟಲ್ ಟೀಸರ್ ರಿಲೀಸ್ ಆಗಿದೆ. ರಾಮಾಯಣ ಸಿನಿಮಾದ ಗ್ಲಿಪ್ಸ್ ಅನ್ನು ಗ್ಲಿಂಪ್ಸ್ ಅನ್ನು ಬೆಂಗಳೂರಿನ ನೆಕ್ಸಸ್ ಮಾಲ್ ಸೇರಿದಂತೆ ವಿವಿಧ ನಗರಗಳಲ್ಲಿ ಬೇರೆ ಬೇರೆ ಐಮ್ಯಾಕ್ಸ್ ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ.
ರಾಮಾಯಣ ಸಿನಿಮಾದ ಫಸ್ಟ್ ಟೈಟಲ್ ಟೀಸರ್ ಅನ್ನು ರಾಕಿಂಗ್ ಸ್ಟಾರ್ ಯಶ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹತ್ತು ವರ್ಷಗಳ ಆಕಾಂಕ್ಷೆ. ಸಾರ್ವಕಾಲಿಕ ಶ್ರೇಷ್ಠ ಮಹಾಕಾವ್ಯವನ್ನು ಜಗತ್ತಿಗೆ ತರುವ ನಿರಂತರ ದೃಢನಿಶ್ಚಯ. ರಾಮಾಯಣವನ್ನು ಅತ್ಯಂತ ಗೌರವದಿಂದ ಪ್ರಸ್ತುತಪಡಿಸಲು ವಿಶ್ವದ ಕೆಲವು ಅತ್ಯುತ್ತಮ ವ್ಯಕ್ತಿಗಳು ಒಟ್ಟಾಗಿ ಶ್ರಮಿಸಿದ್ದಾರೆ. ಅದರ ಫಲಿತಾಂಶ ಇದು ಎಂದು ಯಶ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಆರಂಭಕ್ಕೆ ಸ್ವಾಗತ. ರಾಮ v/s ರಾವಣನ ಅಮರ ಕಥೆಯನ್ನು ಆಚರಿಸೋಣ. ನಮ್ಮ ಸತ್ಯ. ನಮ್ಮ ಇತಿಹಾಸ ಎಂದು ಯಶ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಬ್ರಹ್ಮ, ವಿಷ್ಣು, ಮಹೇಶ್ವರ ದೃಶ್ಯಗಳಿಂದ ಆರಂಭವಾಗುವ ಮೂರು ನಿಮಿಷದ ಟೀಸರ್ ಮೊದಲಿಂದ ಕೊನೆಯ ವರೆಗೂ ಅದ್ಧೂರಿತನದಿಂದ ಕೂಡಿದೆ. ಟೀಸರ್ನಲ್ಲಿ ಸಿನಿಮಾದಲ್ಲಿ ನಟಿಸಿರುವವರ ಹೆಸರು, ತಂತ್ರಜ್ಞರ ಹೆಸರುಗಳನ್ನು ತೋರಿಸಲಾಗಿದೆ. ಸಿನಿಮಾಕ್ಕೆ ‘ರಾಮಾಯಣ’ ಎಂದು ಹೆಸರಿಡಲಾಗಿದ್ದು, ‘ನಮ್ಮ ಸತ್ಯ, ನಮ್ಮ ಇತಿಹಾಸ’ ಎಂಬ ಅಡಿಬರಹ ನೀಡಲಾಗಿದೆ.
ರಾಮಾಯಣ’ ಸಿನಿಮಾವನ್ನು ನಿತೀಶ್ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ನಮಿತ್ ಮಲ್ಹೋತ್ರಾ ಬಂಡವಾಳ ಹೂಡಿದ್ದಾರೆ. ಸುಮಾರು 800 ಕೋಟಿ ರೂಪಾಯಿ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದ ಮೊದಲ ಭಾಗ 2026ರ ದೀಪಾವಳಿಗೆ ಹಾಗೂ 2027ರ ದೀಪಾವಳಿಗೆ ಸಿನಿಮಾದ ಎರಡನೇ ಭಾಗ ಬಿಡುಗಡೆ ಆಗಲಿದೆ.