ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಶಾಲಿನಿ ರಜನೀಶ್ ಅವರು ಒಬ್ಬ ಐಎಎಸ್ ಅಧಿಕಾರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಂಬ ಅರಿವಿಲ್ಲದೇ ಎನ್. ರವಿಕುಮಾರ್ ಅವರು ನಾಲಿಗೆ ಹರಿಬಿಟ್ಟು ಅವರ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ಅವರ ಗೌರವಕ್ಕೆ ಧಕ್ಕೆ ಉಂಟುಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಪಟ್ಟಣದ ಪೊಲೀಸ್ ಠಾಣೆಗೆ ತೆರಳಿ ರವಿಕುಮಾರ್ ಅವರ ಹೇಳಿಕೆ ವಿರುದ್ಧ ದೂರು ದಾಖಲಿಸಿದರು. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಟಿ. ವೆಂಕಟೇಶ, ಉಪಾಧ್ಯಕ್ಷ ಎಚ್. ಕೊಟ್ರೇಶ್, ಸದಸ್ಯರಾದ ಲಾಟಿ ದಾದಪೀರ, ಜಾಕೀರ್ ಹುಸೇನ್, ಉದ್ದಾರ ಗಣೇಶ, ಮುಖಂಡರಾದ ಬಸವರಾಜ ಸಂಗಪ್ಪನವರ್, ಬಂಡ್ರಿ ಗೋಣಿಬಸಪ್ಪ, ಇಸ್ಮಾಯಿಲ್ ಎಲಿಗಾರ, ಎಚ್.ವಸಂತಪ್ಪ, ಟಿಎಚ್ಎಂ ಮಂಜುನಾಥ, ಈಶಪ್ಪ, ಬಿ. ವಾಗೀಶ, ಗುಲಿಕಟ್ಟಿ ಚಂದ್ರಪ್ಪ, ಮೈದೂರು ರಾಮಣ್ಣ, ಮತ್ತೂರು ಬಸವರಾಜ, ಎಚ್.ಟಿ. ಹನುಮಂತ, ಅಲಗಿಲವಾಡದ ವಿಶ್ವನಾಥ, ದೇವೇಂದ್ರಗೌಡ, ಮಾರಪ್ಪ, ಕೊಟೇಪ್ಪ, ಎಲ್. ಮಂಜ್ಯಾನಾಯ್ಕ್, ಜಯಲಕ್ಷ್ಮೀ, ಸುಮಾ ಜಗದೀಶ ಸೇರಿದಂತೆ ಇತರರು ಇದ್ದರು.