‘ಮುನ್ನುಡಿ’ ಚಲನಚಿತ್ರ ಪ್ರದರ್ಶನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಕೇವಲ ಕ್ಲಾಸ್ ರೂಮ್, ಪಾಠ-ಪ್ರವಚನಗಳಷ್ಟೇ ಅಲ್ಲ, ವಿದ್ಯಾರ್ಥಿಗಳ ಸಾಧನೆಗೆ ಪ್ರೇರಣೆಯಾಗುವ ಚಿತ್ರ ವೀಕ್ಷಣೆಯೂ ಬಲು ಅಗತ್ಯ ಎಂಬುದನ್ನು ಮನಗಂಡು ನಮ್ಮ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ `ಮುನ್ನುಡಿ’ ಚಲನಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಲಾಗಿದೆ ಎಂದು ಮಹಾವಿದ್ಯಾಲಯದ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ ಹೇಳಿದರು.

Advertisement

ಸನ್ಮಾರ್ಗ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ‘ಮುನ್ನುಡಿ’ ಚಲನಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂಸ್ಥೆಯ ನಿರ್ದೇಶಕ ಪ್ರೊ. ಸೈಯ್ಯದ್ ಮತೀನ್ ಮುಲ್ಲಾ ಸಾಂದರ್ಭಿಕವಾಗಿ ಮಾತನಾಡಿದರು. ಮಹಾ ವಿದ್ಯಾಲಯದ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಎಲ್ಲ ವಿದ್ಯಾರ್ಥಿಗಳೂ ಚಿತ್ರವನ್ನು ವೀಕ್ಷಿಸಿ ಮೆಚ್ಚಿ, ಸಾಧನೆಗೆ ಪಣ ತೊಟ್ಟರು.

ವೇದಿಕೆಯ ಮೇಲೆ ಸಂಸ್ಥೆಯ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ, ನಿರ್ದೇಶಕರಾದ ಪ್ರೊ. ರೋಹಿತ್ ಒಡೆಯರ್, ಪ್ರೊ. ರಾಹುಲ್ ಒಡೆಯರ್, ಪ್ರೊ. ಪುನೀತ್ ದೇಶಪಾಂಡೆ, ಪ್ರೊ. ಸೈಯ್ಯದ್ ಮತೀನ್ ಮುಲ್ಲಾ, ಆಡಳಿತಾಧಿಕಾರಿ ಎಮ್.ಸಿ. ಹಿರೇಮಠ, ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here