ಆಷಾಢ ಮಾಸದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರೊಂದಿಗೆ ಮೈಸೂರಿನ ಚಾಮುಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಆಷಾಢ ಮಾಸದಲ್ಲಿ ಪ್ರತಿವರ್ಷವೂ ದರ್ಶನ್ ಚಾಮುಂಡಿಯ ಆಶೀರ್ವಾದ ಪಡೆಯುತ್ತಾರೆ. ಆದರೆ ಕಳೆದ ಬಾರಿ ಜೈಲಿನಲ್ಲಿದ್ದ ಕಾರಣ ದೇವಿಯ ದರ್ಶನ ಸಾಧ್ಯವಾಗಿರಲಿಲ್ಲ. ಈ ಬಾರಿ ದಂಪತಿ ಸಮೇತ ಆಗಮಿಸಿ ಚಾಮುಂಡಿ ತಾಯಿ ದರ್ಶನ ಪಡೆದಿದ್ದಾರೆ.
ಇಂದು ಎರಡನೇ ಆಷಾಡ ಶುಕ್ರವಾರವಾದ ಹಿನ್ನೆಲೆಯಲ್ಲಿ ಅದಿದೇವತೆಯ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ದೇಗುಲದಲ್ಲಿ ಬೆಳಗಿನ ಜಾವದಿಂದಲೇ ವಿಶೇಷ ಪೂಜಾ ಕೈಂಕಾರ್ಯ ಶುರುವಾಗಿವೆ. ಮುಂಜಾನೆ 3:30ಕ್ಕೆ ವಿವಿಧ ಅಭಿಷೇಕಗಳು ನಡೆದಿವೆ. ಬೆಳಗ್ಗೆ 6ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದಿದ್ದಾರೆ.
ಇನ್ನೂ ದರ್ಶನ್ ಕಾರು ಚಾಮುಂಡಿ ಬೆಟ್ಟಕ್ಕೆ ಬರ್ತಿದ್ದಂತೆ ಅಭಿಮಾನಿಗಳು ಕಾರಿನ ಸುತ್ತ ಸುತ್ತವರಿದ್ರು. ದರ್ಶನ್ ಕಾರಿನಿಂದ ಇಳಿಯುತ್ತಿದ್ದಂತೆ ಡಿಬಾಸ್, ಡಿಬಾಸ್ ಎಂದು ಕೂಗಿದ್ದಾರೆ. ಮೊಬೈಲ್ ಹಿಡಿದು ವಿಡಿಯೋ ಮಾಡಲು ಮುಂದಾದರು. ಈ ವೇಳೆ ದರ್ಶನ್ ಅಭಿಮಾನಿಗಳಿಗೆ ಕೈ ಮುಗಿದು ದೇವಸ್ಥಾನದ ಒಳಗೆ ತೆರಳಿ ದೇವಿಯ ಆಶೀರ್ವಾದ ಪಡೆದಿದ್ದಾರೆ.