ಹಾಸನ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಜಸ್ಟ್ 40 ದಿನಗಳಲ್ಲಿ ಹೃದಯಾಘಾತದಿಂದ ಹಲವಾರು ಮಂದಿ ಬಲಿಯಾಗಿದ್ದಾರೆ. ಇದೀಗ ಹೃದಯಾಘಾತದಿಂದ ಮತ್ತೋರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ನಡೆದಿದೆ.
ಬಿ.ಎನ್.ವಿಮಲಾ (55) ಹೃದಯಾಘಾತದಿಂದ ಮೃತಪಟ್ಟ ಗೃಹಿಣಿಯಾಗಿದ್ದು, ಬಿ.ಎನ್.ವಿಮಲಾ ಸಕಲೇಶಪುರ ತೋಟದಗದ್ದೆ ಗ್ರಾಮದ ಕುಮಾರ್ ಎಂಬುವವರ ಪತ್ನಿಯಾಗಿದ್ದು, ನಿನ್ನೆ ರಾತ್ರಿ ಮನೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಳೆದ ಒಂದೂವರೆ ತಿಂಗಳಿನಲ್ಲಿ 35 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳು ಆತಂಕ ಸೃಷ್ಟಿಸಿವೆ. ಇದರ ಬಗ್ಗೆ ನಾನಾ ಚರ್ಚೆಗಳು ಶುರುವಾಗಿವೆ. ಹಠಾತ್ ನಿಧನಕ್ಕೆ ಏನು ಕಾರಣ ಎಂಬುದನ್ನು ಹೇಳಲು ರಾಜ್ಯ ಸರ್ಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲ.