ಬೆಂಗಳೂರು:- ಕರ್ನಾಟಕದ ಕರಾವಳಿಯಲ್ಲಿ ವರುಣನಾರ್ಭಟ ಜೋರಾಗಿದ್ದು, ಜುಲೈ 12ರವರೆಗೂ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪ. ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್ನಲ್ಲಿ ಕೂಡ ಮಳೆಯಾಗಲಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.