ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದು ಬಹುತೇಕ ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ. ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಬದಲಾವಣೆ ಕಾಣಬಹುದು” ಎಂಬುದು ತಮ್ಮ ನಂಬಿಕೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದಿಂದಾಗಿ ಸಿದ್ದರಾಮಯ್ಯ ರಾಜ್ಯ ರಾಜಕಾರಣದಿಂದ ಹೊರಬಂದು ರಾಷ್ಟ್ರಮಟ್ಟದ ರಾಜಕೀಯಕ್ಕೆ ಸಾಗಲಿದ್ದಾರೆ. ಸಿದ್ದರಾಮಯ್ಯನವರಿಗೆ ಎಐಸಿಸಿಯಿಂದ ಒಬಿಸಿ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗುತ್ತಿದೆ ಎಂಬುದು ಸ್ಪಷ್ಟ ಸೂಚನೆ ಎಂದ ವಿಜಯೇಂದ್ರ ಅವರು ದೆಹಲಿಗೆ ಶಿಫ್ಟ್ ಆಗುವುದು ಖಚಿತ ಎಂದು ಹೇಳಿದರು.
ಇನ್ನೂ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಬಂದು ಶಾಸಕರ ಅಭಿಪ್ರಾಯ ಸಂಗ್ರಹಿಸಿರುವುದರಿಂದ, “ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಅಭಿಪ್ರಾಯಪಟ್ಟರು.