ಬೆಂಗಳೂರು: ನಗರದ ಲಾಲ್ ಬಾಗ್ ರಸ್ತೆಯಲ್ಲಿರುವ ಬಟ್ಟೆ ಗೋದಾಮೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಮರುಧರ್ ಏಜೆನ್ಸೀಸ್‌ನ ಬಟ್ಟೆ ಗೋದಾಮಿನಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಸಾವಿರಾರು ರೂ. ಮೌಲ್ಯದ ಬಟ್ಟೆ ಹ್ಯಾಂಗರ್‌ಗಳು ಬೆಂಕಿಗಾಹುತಿಯಾಗಿವೆ.
Advertisement
ಗೋದಾಮಿನ ಒಂದು ಮೂಲೆಯಲ್ಲಿ ಇಟ್ಟಿದ್ದ ಬಟ್ಟೆ ಹ್ಯಾಂಗರ್‌ಗಳಲ್ಲಿ ಬೆಳಿಗ್ಗೆ ಹೊತ್ತಿಕೊಂಡ ಬೆಂಕಿ ತಕ್ಷಣವೇ ಇಡೀ ಗೋದಾಮಿಗೆ ವಿಸ್ತರಿಸಿತು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಆರಂಭವಾದ ಶಂಕೆ ವ್ಯಕ್ತವಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಶ್ರಮಿಸಿದರು. ಹೆಚ್ಚಿನ ನಷ್ಟವಾಗುವ ಮುನ್ನವೇ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದು, ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.