ಮಂಡ್ಯ:- ಸವಾರನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬೈಕ್ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿಯಲ್ಲಿ ಜರುಗಿದೆ.
Advertisement
ಮೃತರನ್ನು ರಾಮಣ್ಣ, ಭರತ್ ಎಂದು ಗುರುತಿಸಲಾಗಿದೆ. ಭಾನುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಕೆಎ 06, ಇಎಸ್ 838 ಟಿವಿಎಸ್ ಮೊಪೆಡ್‌ನಲ್ಲಿ ರಾಮಣ್ಣ, ಭರತ್ ಇಬ್ಬರು ಪ್ರಯಾಣಿಸುತ್ತಿದ್ದಾಗ ಚಾಲಕ ರಾಮಣ್ಣರ ಅತಿವೇಗ, ಅಜಾಗರೂಕತೆಯಿಂದ ಹೊಸಗಾವಿ ಗ್ರಾಮದ ವಿ.ಸಿ.ನಾಲೆಯ ತಡೆಗೋಡೆಗೆ ಡಿಕ್ಕಿಯಾಗಿ ಉರುಳಿ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.