ಬೆಂಗಳೂರು: ಬೆಂಗಳೂರು-ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ದೇವನಹಳ್ಳಿ ಹೊರವಲಯದ ಡಾಬಾ ಗೇಟ್ ಬಳಿ ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿಯಿಂದ ಈ ಘಟನೆ ನಡೆದಿದೆ.
Advertisement
ಜಾರ್ಖಂಡ್ ಮೂಲದ ದ್ವಿಚಕ್ರ ವಾಹನ ಸವಾರನೊಬ್ಬ ಟಿಪ್ಪರ್ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ಸ್ಥಳೀಯರು ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಘಟನೆ ಸಂಬಂಧ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.