ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ಲಾರಿ ಚಾಲಕನೊಬ್ಬನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು, ಹೃದಯಾಘಾತದಿಂದ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
Advertisement
ಮೃತ ಚಾಲಕನನ್ನು ಮಹಾರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿ ಬಾಬುರಾವ್ ಖಮ್ಮಟ್ (50) ಎಂದು ಗುರುತಿಸಲಾಗಿದೆ. ಅವರು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಗೂಡ್ಸ್ ಲಾರಿ ಓಡಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡ ಕಾರಣ, ತಕ್ಷಣವೇ ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಅಸ್ವಸ್ಥಗೊಂಡು ಸಾವನ್ನಪ್ಪಿದರು.ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.