ಧಾರವಾಡ: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತದ ಸಾವಿನ ಸರಣಿ, ಅದರಲ್ಲೂ ಹಾಸನದಲ್ಲಿ ಹೆಚ್ಚಾಗುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಇದರ ಬೆನ್ನಲ್ಲೇ 26 ವರ್ಷದ ಯುವತಿಯು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
Advertisement
ಜೀವಿತಾ ಕುಸಗೂರ (26) ಮೃತ ದುರ್ದೈವಿಯಾಗಿದ್ದು, ಮಂಗಳವಾರ ಬೆಳಗ್ಗೆ ಮನೆಯಲ್ಲಿ ತಲೆ ಸುತ್ತು ಬಂದು ಜೀವಿತಾ, ಸುಸ್ತಾಗಿ ಕುಳಿತಿದಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆದರೆ ಜೀವಿತಾ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಆಸ್ಪತ್ರೆಯಲ್ಲಿ ವೈದ್ಯರು ಹೃದಯಾಘಾತದಿಂದಲೇ ಜೀವಿತಾ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಕೃಷಿಯಲ್ಲಿ ಎಂಎಸ್‌ಸಿ ಸ್ನಾತಕೋತ್ತರ ಪದವಿ ಓದಿದ್ದ ಜೀವಿತಾ, ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು.