ಜೋಗತಿಯಾಗಿ ವೇಷ ಧರಿಸಿದ ನಟ ಶ್ರೀನಗರ ಕಿಟ್ಟಿ

0
Spread the love

ಸ್ಯಾಂಡಲ್​ವುಡ್​ ನಟ ಶ್ರೀನಗರ ಕಿಟ್ಟಿ ಡಿಫರೆಂಟ್‌ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದುವರೆಗೂ ಕಾಣಿಸಿಕೊಳ್ಳದ ಲುಕ್‌ ನಲ್ಲಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು ಕಿಟ್ಟಿಯನ್ನು ನೋಡಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ.

Advertisement

ಪತ್ರಕರ್ತ ರವಿ ಬೆಳಗೆರೆ ಅವರು ಬರೆದ ಜೋಗತಿಯರ ಜೀವನದ ಆಗು ಹೋಗುಗಳ ಕುರಿತಾದ `ವೇಷಗಳು’ ಎಂಬ ಸಣ್ಣ ಕಥೆಯನ್ನಾಧರಿಸಿ ಅದೇ ಹೆಸರಿನಲ್ಲಿ ಸಿನಿಮಾವೊಂದು ತಯಾರಾಗುತ್ತಿದೆ. ಈ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ನಟಿಸಿದ್ದು ಕಿಟ್ಟಿ ಜೋಗತಿಯಾಗಿ ಬಣ್ಣ ಹಚ್ಚುತ್ತಿದ್ದಾರೆ.

ಗ್ರೀನ್ ಟ್ರೀ ಸ್ಟುಡಿಯೋಸ್ ಅಡಿಯಲ್ಲಿ ಕಿಶನ್ ರಾವ್ ದಳವಿ ಅವರು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿನ್ನೆ (ಜು.8) ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬವಿದ್ದು ಈ ಹಿನ್ನೆಲೆಯಲ್ಲಿ ಅವರ ಫಸ್ಟ್‌ ಲುಕ್‌ ರಿಲೀಸ್‌ ಮಾಡಲಾಗಿದೆ.

ಸದ್ಯ ರಿಲೀಸ್​ ಆಗಿರೋ ಟೀಸರ್​ನಲ್ಲಿ ನಟ ಶ್ರೀನಗರ ಕಿಟ್ಟಿ ಅವರು ಬಸಪ್ಪ ಹಾಗೂ ಬಸಮ್ಮ ಜೋಗತಿಯಾಗಿ ಎರಡು ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here